ಭುವನೇಶ್ವರ (ಒಡಿಶಾ):ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಸಂದೇಶ ಸಾರುವ ಅವಹೇಳನಕಾರಿಯುತ ಪೋಸ್ಟ್ ಹರಿಬಿಟ್ಟಿದ್ದ ಆರೋಪಿವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಮೋದಿ, ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅಂದರ್ - ದ್ವೇಷ ಸಂದೇಶ ಸಾರುವ ಪೋಸ್ಟ್
ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ 42 ವರ್ಷದ ವ್ಯಕ್ತಿಯೋರ್ವನನ್ನು ಒಡಿಶಾದಲ್ಲಿ ಬಂಧಿಸಲಾಗಿದೆ.
ಬಂಧಿತ ಆರೋಪಿಯು 42 ವರ್ಷದ ಕಟಕ್ನ ಕುಸುಂಬಿ ಗ್ರಾಮದವನೆಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ವ್ಯಕ್ತಿಯ ವಿರುದ್ಧ ಸೆಕ್ಷನ್ 124 ಎ (ದೇಶದ್ರೋಹ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಪೊಲೀಸರು ಇಲ್ಲಿನ ಸ್ಥಳೀಯ ಪೊಲೀಸರ ಸಹಾಯವನ್ನು ಕೋರಿದ್ದರು. ಅದರಂತೆ ಆರೋಪಿಯನ್ನು ಬಂಧಿಸಲು ನಮ್ಮ ಸಿಬ್ಬಂದಿ ಅವರಿಗೆ ಅಗತ್ಯವಾದ ಸಹಕಾರವನ್ನು ನೀಡಿದರು ಎಂದು ಕಟಕ್ (ಸದರ್) ಪೊಲೀಸ್ ವರಿಷ್ಠಾಧಿಕಾರಿ ಜುಗಲ್ ಕಿಶೋರ್ ಬನೋಥ್ ತಿಳಿಸಿದ್ದಾರೆ. ಸಿಂಘಾಬಲಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.