ಬಲ್ಲಿಯಾ (ಉತ್ತರಪ್ರದೇಶ): ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ರಾಕೇಶ್ (22) ಎಂಬ ಯುವಕ ಓರ್ವ ಹುಡುಗಿಯನ್ನು ಪ್ರೀತಿಸುತ್ತಿದ್ದ, ಈ ಹಿನ್ನೆಲೆ ಹುಡುಗಿಯ ಕುಟುಂಬಸ್ಥರು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ಹುಡುಗಿಯಿಂದ ದೂರ ಹೋಗುವಂತೆ ಸೂಚಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ನಾಥ್ ದುಬೆ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ನಾಥ್ ದುಬೆ ರಾಕೇಶ್ನನ್ನು ತಕ್ಷಣ ಗೋಪಾಲ್ಪುರದ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಆದ್ರೆ, ಆತನ ಸ್ಥಿತಿ ಗಂಭೀರವಾಗಿದ್ದ ಕಾರಣ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟ ಎಂದು ದುಬೆ ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.