ನವದೆಹಲಿ :ನಗರದ ಏಮ್ಸ್ ಆಸ್ಪತ್ರೆಯಲ್ಲಿ 22 ವರ್ಷದ ಯುವಕನೋರ್ವ ಆಸ್ಪತ್ರೆಯ ಮೆಟ್ಟಲಿನ ಗ್ರಿಲ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಬಿಹಾರದ ಗೋಪಾಲಗಂಜ್ ನಿವಾಸಿ ಬಿಟ್ಟು ಕುಮಾರ್ ತಿವಾರಿ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 6.16 ಸಮಯದಲ್ಲಿ ಆಲ್ ಇಂಡಿಯಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್)ನ ತುರ್ತು ವಾರ್ಡಿನ 2ನೇ ಮಹಡಿಯಲ್ಲಿರುವ ಮೆಟ್ಟಿಲಿನ ಗ್ರಿಲ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.