ಮೆಹಬೂಬಾಬಾದ್(ತೆಲಂಗಾಣ): ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕಟ್ಟಡದಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ತೆಲಂಗಾಣದ ಮೆಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕಾರ್ಮಿಕ ಸಾವು - ತೆಲಂಗಾಣ
ಮಂಗಗಳಿಂದ ತಪ್ಪಿಸಿಕೊಳ್ಳಲು ಹೋಗಿ ನಿಯಂತ್ರಣ ತಪ್ಪಿ ಕಟ್ಟಡದಿಂದ ಕೆಳಗೆ ಬಿದ್ದು, ಕಾರ್ಮಿಕನೋರ್ವ ಮೃತಪಟ್ಟಿದ್ದಾರೆ.
ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕಾರ್ಮಿಕ ಸಾವು
ಮೆಹಬೂಬಾಬಾದ್ ಜಿಲ್ಲೆಯ ಕಂಕರಾಬಬೋದ್ ನಿವಾಸಿ ಮೊಹಮ್ಮದ್ ಮಝಾರ್ ಮೃತ ಕಾರ್ಮಿಕ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ವೇಳೆ ಮಂಗಗಳ ಗುಂಪು ಮೊಹಮ್ಮದ್ ಮಝಾರ್ ಕಡೆಗೆ ಬಂದಿವೆ. ಮಂಗಗಳಿಂದ ತಪ್ಪಿಸಿಕೊಳ್ಳಲು ಹೋಗಿ ನಿಯಂತ್ರಣ ತಪ್ಪಿ ಕಟ್ಟಡದಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಇವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೃತ ಮೊಹಮ್ಮದ್ ಮಝಾರ್ ಅವರ ಪತ್ನಿ ಗರ್ಭಿಣಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.