ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸುದ್ದಿಗಳನ್ನು ಹರಿಬಿಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಸುಶಾಂತ್ ಸಿಂಗ್ ಸಾವು ಪ್ರಕರಣ: ನಕಲಿ ಸುದ್ದಿ ಹರಿಬಿಡುತ್ತಿದ್ದ ವ್ಯಕ್ತಿಯ ಬಂಧನ..! - Sushant case
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಕಲಿ ಸುದ್ದಿಗಳನ್ನು ಹರಿಬಿಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಸುಶಾಂತ್ ಸಿಂಗ್ ಸಾವು ಪ್ರಕರಣ
ಬಂಧಿತ ವ್ಯಕ್ತಿಯು ಮಹಾರಾಷ್ಟ್ರ ಸರ್ಕಾರ ಮತ್ತು ಮುಂಬೈ ಪೊಲೀಸರನ್ನು ದೂಷಿಸಿ, ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಅಪ್‌ಲೋಡ್ ಮಾಡುತ್ತಿದ್ದ. ಆ ವಿಡಿಯೋಗಳು ಸರ್ಕಾರ ಮತ್ತು ಮುಂಬೈ ನಗರ ಪೊಲೀಸರ ಚಿತ್ರಣವನ್ನು ಹಾನಿಗೊಳಿಸುವಂತೆ ಇದ್ದಿದ್ದರಿಂದ, ಆತನನ್ನು ಬಂಧಿಸಲಾಗಿದೆ.