ಜೈಪುರ್(ರಾಜಸ್ಥಾನ): ಮೃತ ಅಣ್ಣನ ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಮುಂದಾಗಿದ್ದು, ಇದಕ್ಕೆ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದ್ದರಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ನಡೆದಿದೆ.
ಜೈಪುರ್ನ ದುಸ್ಸಾ ಜಿಲ್ಲೆಯ ಲಾವಾನ್ ಪೊಲೀಸ್ ಠಾಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯ ಸಹೋದರ ಕಳೆದ ಕೆಲ ತಿಂಗಳ ಹಿಂದೆ ಸಾವನ್ನಪ್ಪಿದ್ದ. ಇದಾದ ಬಳಿಕ ಗಂಡನ ಮನೆಯಲ್ಲೇ ಉಳಿದುಕೊಂಡಿದ್ದ ಮಹಿಳೆ ಆತನ ಸಹೋದರನೊಂದಿಗೆ ಸಂಬಂಧವಿಟ್ಟುಕೊಂಡಿದ್ದಳಂತೆ. ಜೊತೆಗೆ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರಂತೆ. ಈ ವೇಳೆ ಮನೆಯವರನ್ನ ಕೇಳಿದ್ದು, ಅದಕ್ಕೆ ವಿರೋಧ ವ್ಯಕ್ತವಾಗಿದೆ.