ಘಾಜಿಯಾಬಾದ್ (ಉತ್ತರ ಪ್ರದೇಶ): ಹೆಂಡತಿ ಮತ್ತು ಮಕ್ಕಳನ್ನು ಕೊಲೆಗೈದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದಿದೆ.
ಘಾಜಿಯಾಬಾದ್‌ನ ಅರ್ಥಲಾ ಪ್ರದೇಶದಲ್ಲಿನ ನಿವಾಸದಲ್ಲಿ ವ್ಯಕ್ತಿ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದಿದ್ದಾನೆ. ಆರೋಪಿಯನ್ನು ಧೀರಜ್ ತ್ಯಾಗಿ (27) ಎಂದು ಗುರುತಿಸಲಾಗಿದ್ದು, ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.