ಶ್ರೀ ಗಂಗಾನಗರ(ರಾಜಸ್ಥಾನ): 50 ವರ್ಷದ ವ್ಯಕ್ತಿಯೋರ್ವ ಕಟ್ಟಿಕೊಂಡ ಹೆಂಡತಿ ಹಾಗೂ ಮಗನ ಕೊಲೆ ಮಾಡಿ ನಂತರ ಪೊಲೀಸರಿಗೆ ಶರಣಾಗಿರುವ ಘಟನೆ ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಕಬ್ಬಿಣದ ರಾಡ್ನಿಂದ ಮಗ ಹಾಗೂ ಹೆಂಡತಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ನಂತರ ಕಿರಿಯ ಮಗನ ಮೇಲೂ ದಾಳಿ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಬಳಿಕ 50 ವರ್ಷದ ಸಿಂಗ್ ಪೊಲೀಸರ ಮುಂದೆ ಶರಣಾಗಿದ್ದಾನೆ.
ಕಬ್ಬಿಣದ ರಾಡ್ನಿಂದ ಹೆಂಡ್ತಿ-ಮಗನ ಕೊಲೆ ಶ್ರೀ ಗಂಗಾನಗರ ಆರ್ಯನ್ ಗ್ರಾಮದ ಸತ್ನಮ್ ಸಿಂಗ್ ಹಾಗೂ ಹೆಂಡತಿ ನಡುವೆ ಕಳೆದ ಕೆಲ ವರ್ಷಗಳಿಂದ ಜಗಳವಾಗುತ್ತಿತ್ತು. ಭಾನುವಾರ ಅದು ತಾರಕಕ್ಕೇರಿದ್ದು, ರಾತ್ರಿ ಮಲಗಿದ್ದ ವೇಳೆ ಈ ಕೃತ್ಯವೆಸಗಿದ್ದಾನೆ. ತಾಯಿ ಹಾಗೂ 20 ವರ್ಷದ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದರ ಬಗ್ಗೆ ಕಿರಿಯ ಮಗ ರಾಜವೇಂದ್ರ ಈಟಿವಿ ಭಾರತ್ಗೆ ಮಾಹಿತಿ ನೀಡಿದ್ದು, ನಾವು ರಾತ್ರಿ ಮಲಗಿದ್ದ ವೇಳೆ ಕಬ್ಬಿಣದ ರಾಡ್ನಿಂದ ತಂದೆ ಹಲ್ಲೆ ಮಾಡಿದ್ದಾನೆ. ಈ ವೇಳೆ ನನ್ನ ಮೇಲೂ ಹಲ್ಲೆ ಮಾಡಲು ಮುಂದಾಗಿದ್ದು, ನಾನು ಸ್ಥಳದಿಂದ ತಪ್ಪಿಸಿಕೊಂಡಿದ್ದೇನೆ ಎಂದಿದ್ದಾರೆ. ಆರೋಪಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.