ಕರ್ನಾಟಕ

karnataka

ETV Bharat / bharat

ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದು ವ್ಯಕ್ತಿ ಪರಾರಿ - ಮಹಿಳೆಯರ ವಿರುದ್ಧದ ಅಪರಾಧಗಳು

ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದು ವ್ಯಕ್ತಿ ಪರಾರಿಯಾದ ಘಟನೆ ರಾಜಸ್ಥಾನದ ಬನ್ಸ್ವಾರ ಜಿಲ್ಲೆಯಲ್ಲಿ ನಡೆದಿದೆ.

Man kills wife, two children
ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದು ವ್ಯಕ್ತಿ ಪರಾರಿ

By

Published : Oct 22, 2020, 6:40 PM IST

ಜೈಪುರ (ರಾಜಸ್ಥಾನ):ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳನ್ನು ಚೂಪಾದ ಆಯುಧದಿಂದ ಹಲ್ಲೆ ಮಾಡಿ ಕೊಂದು ಪರಾರಿಯಾದ ಘಟನೆ ರಾಜಸ್ಥಾನದ ಬನ್ಸ್ವಾರ ಜಿಲ್ಲೆಯಲ್ಲಿ ನಡೆದಿದೆ.

ಬನ್ಸ್ವಾರದಲ್ಲಿ ಸುಮಾರು 40 ವರ್ಷ ವಯಸ್ಸಿನ ದೇವೇಂದ್ರ ಶರ್ಮಾ ಅವರ ಪತ್ನಿ ನೀತಾ ಶರ್ಮಾ (37), ಮಗಳು ಶ್ವೇತಾ (14) ಮತ್ತು ಮಗ ಆರ್ಯನ್ (11) ಅವರನ್ನು ಕೊಂದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊತ್ವಾಲಿ ಪೊಲೀಸ್ ಠಾಣೆ ಪ್ರದೇಶದ ರತಿ ತಲೈ ಪ್ರದೇಶದಲ್ಲಿ ಬಾಡಿಗೆ ವಸತಿ ಸೌಕರ್ಯದಲ್ಲಿ ವಾಸಿಸುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಗುರುವಾರ ಬೆಳಗ್ಗೆ ಈ ವಿಷಯ ಬೆಳಕಿಗೆ ಬಂದಿದೆ. ಸದ್ಯಕ್ಕೆ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಘಟನೆ ನಡೆದ ಕೊಠಡಿಯಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಆರೋಪಿಗಾಗಿ ಶೋಧಕಾರ್ಯ ಹುಡುಕಾಟ ಆರಂಭಿಸಲಾಗಿದೆ ಎಂದು ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಪ್ರವೀಣ್ ಸಿಂಗ್ ತಿಳಿಸಿದ್ದಾರೆ.

ABOUT THE AUTHOR

...view details