ಕರ್ನಾಟಕ

karnataka

ETV Bharat / bharat

ಮಥುರಾ ಬ್ಯಾಂಕ್ ಲೂಟಿ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್​, ದರೋಡೆ ಹಣ ವಶಕ್ಕೆ - ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿ

ಮಥುರಾದ ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ದಾಮೋದಪುರದಲ್ಲಿರುವ ಗ್ರಾಮೀಣ ಬ್ಯಾಂಕ್ ಲೂಟಿ ಮಾಡಿದ್ದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆ ಮಾಡಿದ ಹಣವನ್ನು ವಶಪಡಿಸಿಕೊಂಡಿದ್ದಾರೆ.

arrest
arrest

By

Published : May 16, 2020, 9:34 AM IST

ಮಥುರಾ(ಯು.ಪಿ): ಮಥುರಾದಲ್ಲಿ ಇತ್ತೀಚೆಗೆ ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಲೂಟಿ ಮಾಡಿದ್ದ ಎಲ್ಲಾ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಪರ್ವಿಂದರ್ ಗೌತಮ್ ಎಂದು ಗುರುತಿಸಲಾಗಿದೆ. ಆರೋಪಿ ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಕುಲ್ ಬ್ಯಾರೇಜ್ ಬಳಿ ಪೊಲೀಸ್ ಸಿಬ್ಬಂದಿಯೊಂದಿಗೆ ಗುಂಡಿನ ಚಕಮಕಿ ನಡೆಸಿದ್ದ. ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಥುರಾ ಎಸ್‌ಎಸ್‌ಪಿ ಗೌರವ್ ಗ್ರೋವರ್ ತಿಳಿಸಿದ್ದಾರೆ.

ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರನೇ ವ್ಯಕ್ತಿ ಗೌತಮ್​ಗೆ ಶೂಟೌಟ್‌ನಲ್ಲಿ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸಿದ್ದಾಗಿ ತಪ್ಪೊಪ್ಪಿಕೊಂಡಿರುವ ಗೌತಮ್​ನಿಂದ 2,51,500 ರೂ. ನಗದು, ಒಂದು ಬೈಕ್ ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಮಹಿಳೆ ಸೇರಿದಂತೆ ಐವರು ಶಂಕಿತರನ್ನು ಈ ಹಿಂದೆ ಬಂಧಿಸಲಾಗಿದ್ದು, ಅವರಿಂದ 17,10,000 ರೂ. ವಶಪಡಿಸಿಕೊಳ್ಳಲಾಗಿತ್ತು.

ಈ ದರೋಡೆಕೋರರ ತಂಡ ಮಥುರಾದ ಸದರ್ ಬಜಾರ್ ಪೊಲೀಸ್ ಠಾಣಾ ಪ್ರದೇಶದ ದಾಮೋದಪುರದಲ್ಲಿರುವ ಗ್ರಾಮೀಣ ಬ್ಯಾಂಕ್ ಲೂಟಿ ಮಾಡಿತ್ತು.

ABOUT THE AUTHOR

...view details