ನವದೆಹಲಿ:ಕೋವಿಡ್ನ ಗರಿಷ್ಠ ಪರಿಣಾಮವನ್ನು ಮಹಿಳೆಯರು, ಮಕ್ಕಳು ಮತ್ತು ಹದಿಹರೆಯದವರು ಅನುಭವಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ತಾಯಿ, ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯದ ಕುರಿತ ಕಾರ್ಯಕ್ರಮವೊಂದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಸಚಿವ ಹರ್ಷವರ್ಧನ್, ಮಹಿಳೆಯರು, ಮಕ್ಕಳು ಮತ್ತು ಹದಿಹರೆಯದವರು ಎಲ್ಲಾ ಆರೋಗ್ಯ ಸೇವೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ ಮಾರ್ಗದರ್ಶನ ನೀಡಿದ್ದಾರೆ.