ಲಖನೌ :ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕೆಂದು ಒತ್ತಾಯಿಸಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ. ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಅವರು, ಇದು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, 'ರಾಜಸ್ಥಾನ ಮುಖ್ಯಮಂತ್ರಿ ಕಾನೂನು ಉಲ್ಲಂಘಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಮೊದಲು ಅವರು ಬಹುಜನ ಸಮಾಜವಾದಿ ಪಕ್ಷದ ಶಾಸಕರನ್ನು ಕಾಂಗ್ರೆಸ್‌ಗೆ ಸೇರುವಂತೆ ಮಾಡಿ ದ್ರೋಹ ಮಾಡಿದ್ದರು. ಈಗ ಮತ್ತೆ ಅಕ್ರಮವಾಗಿ ಫೋನ್ ಕರೆಗಳನ್ನು ಕದ್ದಾಲಿಸುವ ಮೂಲಕ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ’ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಬೇಕು ಎಂದು ಒತ್ತಾಯಿಸಿದ್ದಾರೆ.