ನವದೆಹಲಿ: ವಂದೇ ಭಾರತ್ ಮಿಷನ್ ಮೂಲಕ ವಿದೇಶದಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಕರೆತರಲಾಗುತ್ತದೆ. ಯಾವುದೇ ರಾಜ್ಯಗಳ ನಡುವೆ ತಾರತಮ್ಯ ಮಾಡುತ್ತಿಲ್ಲ ಎಂದು ವಿದಾಶಾಂಗ ಇಲಾಖೆ ಸ್ಪಷ್ಟಪಡಿಸಿದೆ.
ಕೇಂದ್ರವು ರಾಜ್ಯಗಳ ನಡುವೆ ತಾರತಮ್ಯ ಮಾಡುತ್ತಿದೆ ಎಂಬ ಪಶ್ಚಿಮ ಬಂಗಾಳ ಗೃಹ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರ ಆರೋಪಕ್ಕೆ ಪ್ರತಿಕ್ರಿಯೆಯಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿದೇಶಾಂಗ ಇಲಾಖೆ ರಾಜ್ಯಗಳ ನಡುವೆ ತಾರತಮ್ಯ ಮಾಡುವುದಿಲ್ಲ. ಭಾರತ ಸರ್ಕಾರದ ವಂದೇ ಭಾರತ್ ಮಿಷನ್ ಮೂಲಕ ಪಶ್ಚಿಮ ಬಂಗಾಳ ಸೇರಿದಂತೆ ವಿದೇಶದಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಕರೆತರಲಾಗುತ್ತದೆ. 3,700 ಕ್ಕೂ ಹೆಚ್ಚು ಜನರು ವಿಶ್ವದ ವಿವಿಧ ಭಾಗಗಳಿಂದ ವಾಪಸಾಗಲು ನೋಂದಾಯಿಸಿಕೊಂಡಿದ್ದಾರೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಸರ್ಕಾರ ವಿದೇಶದಿಂದ ಬರುವವರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಿಕೊಂಡಿದ್ದರೆ ನಾವು ವಿಮಾನದ ವ್ಯವಸ್ಥೆ ಮಾಡುತ್ತೇವೆ. ನೆರೆಹೊರೆಯ ರಾಷ್ಟ್ರಗಳಿಂದ ಭೂಗಡಿ ಮೂಲಕ ಆಗಮನಕ್ಕೂ ಸಹಾಯ ಮಾಡಲಾಗುತ್ತದೆ ಎಂದು ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.