ಕೊಚ್ಚಿ(ಕೇರಳ): ಚೀನಾದಲ್ಲಿ ಉಂಟಾದ ಭೀಕರ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಚೀನಾದ ಕುನ್ಮಿಂಗ್ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ 15 ವಿದ್ಯಾರ್ಥಿಗಳನ್ನು ಶುಕ್ರವಾರ ವಿಶೇಷ ವಿಮಾನದಲ್ಲಿ ಕೇರಳಕ್ಕೆ ಕರೆತರಲಾಯಿತು.
ಚೀನಾದಲ್ಲಿ ಕೊರೊನಾ ಭೀತಿಯಲ್ಲಿದ್ದ 15 ವಿದ್ಯಾರ್ಥಿಗಳು ರಾಜ್ಯಕ್ಕೆ ವಾಪಸ್ - ಕರೋನ ವೈರಸ್ ಕೇರಳ
ವಿಶ್ವವ್ಯಾಪಿ ಭಯ ಹುಟ್ಟಿಸಿರುವ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಚೀನಾ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದ 15 ವಿದ್ಯಾರ್ಥಿಗಳನ್ನು ಕೇರಳಕ್ಕೆ ಕರೆತರಲಾಗಿದೆ.
![ಚೀನಾದಲ್ಲಿ ಕೊರೊನಾ ಭೀತಿಯಲ್ಲಿದ್ದ 15 ವಿದ್ಯಾರ್ಥಿಗಳು ರಾಜ್ಯಕ್ಕೆ ವಾಪಸ್ Medical students](https://etvbharatimages.akamaized.net/etvbharat/prod-images/768-512-6000964-thumbnail-3x2-vicky.jpg)
ಆ್ಯಂಬುಲೆನ್ಸ್ ಮೂಲಕ ವಿದ್ಯಾರ್ಥಿಗಳನ್ನು ಕರೆತಂದಿರುವುದು
ಆ್ಯಂಬುಲೆನ್ಸ್ ಮೂಲಕ ವಿದ್ಯಾರ್ಥಿಗಳನ್ನು ಕರೆತಂದಿರುವುದು
ವಿಶೇಷ ವಿಮಾನವು ಚೀನಾದಿಂದ ಬ್ಯಾಂಕಾಕ್ ಮೂಲಕ ಕೊಚ್ಚಿ ವಿಮಾನ ನಿಲ್ದಾಣಕ್ಕೆ ವಿದ್ಯಾರ್ಥಿಗಳನ್ನು ಕರೆತಂದಿದ್ದು, ಎಲ್ಲರೂ ಡೇಲಿಯನ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿಗಳನ್ನು ಕಲಾಮಸ್ಸೆರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಅಗತ್ಯ ವೈದ್ಯಕೀಯ ಪರೀಕ್ಷೆಗಳ ನಂತರ ವಿದ್ಯಾರ್ಥಿಗಳಿಗೆ ತಮ್ಮ ಮನೆಗಳಿಗೆ ಹೋಗಲು ಅವಕಾಶ ಕಲ್ಪಿಸಿದ್ದು, 28 ದಿನಗಳ ಕಾಲ ಸಾರ್ವಜನಿಕರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.
Last Updated : Feb 8, 2020, 5:54 PM IST