ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ, ನೋಯ್ಡಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿನ್ನೆ ರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಕಂಪ... 3.2 ತೀವ್ರತೆ ದಾಖಲು! - ಭೂಕಂಪ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೀಗ ಮತ್ತೊಮ್ಮೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2ರಷ್ಟು ತೀವ್ರತೆ ದಾಖಲಾಗಿದೆ.
earthquake
ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ರಾತ್ರಿ 10ಗಂಟೆ 42 ನಿಮಿಷಕ್ಕೆ ಭೂಕಂಪ ಸಂಭವಿಸಿದ್ದು, ಯಾವುದೇ ಸಾವು-ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಇದಕ್ಕೂ ಮುಂಚಿತವಾಗಿ ಮೇ.29ರಂದು ದೆಹಲಿಯ ಎನ್ಸಿಆರ್ ಹಾಗೂ ಪೂರ್ವ ಹರಿಯಾಣದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿತ್ತು. ಕಳೆದ ಕೆಲ ತಿಂಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಮೇಲಿಂದ ಮೇಲೆ ಭೂಕಂಪ ಸಂಭವಿಸುತ್ತಿದೆ.