ನವದೆಹಲಿ: ಕೊರೊನಾ ಮಹಾಮಾರಿಯನ್ನು ಹೊಡೆದೋಡಿಸುವ ಸಲುವಾಗಿ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಆರ್ಎಂಎಫ್) ಅನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ.
ಕೇಂದ್ರ ಗೃಹ ಇಲಾಖೆಯಿಂದ ರಾಜ್ಯಗಳಿಗೆ ಸಹಕಾರ: 11ಸಾವಿರ ಕೋಟಿ ಬಿಡುಗಡೆಗೆ ಸಮ್ಮತಿ - ಕೇಂದ್ರ ಗೃಹ ಇಲಾಖೆ
ರಾಜ್ಯಗಳನ್ನು ಕೊರೊನಾ ಸೋಂಕಿನಿಂದ ಮುಕ್ತ ಮಾಡಲು ಕೇಂದ್ರ ಗೃಹ ಇಲಾಖೆ ಯತ್ನಿಸುತ್ತಿದೆ. ಈಗ ಸದ್ಯಕ್ಕೆ ರಾಜ್ಯ ವಿಪತ್ತು ನಿರ್ವಹಣಾ ನಿಧಿಯನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ.
ಕೇಂದ್ರ ಗೃಹ ಇಲಾಖೆ
ರಾಜ್ಯ ವಿಪತ್ತು ನಿರ್ವಹಣಾ ನಿಧಿ ಅಡಿ ಒಟ್ಟು 11,092 ಕೋಟಿಯನ್ನು ಎಲ್ಲ ರಾಜ್ಯಗಳಿಗೆ ಹಂಚಲಿದೆ. ಇದು ರಾಜ್ಯ ವಿಪತ್ತು ನಿರ್ವಹಣಾ ನಿಧಿಯ ಮೊದಲ ಕಂತಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ ಕಂತುಗಳನ್ನು ಹಂತಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಇಲಾಖೆಯ ವಕ್ತಾರರು ಸ್ಪಷ್ಟಪಡಿಸಿದ್ದಾರೆ.