ಕರ್ನಾಟಕ

karnataka

ETV Bharat / bharat

ಆಂಧ್ರ-ತೆಲಂಗಾಣ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ: ಅಮಿತ್ ಶಾ - ಕೇಂದ್ರ ಗೃಹ ಇಲಾಖೆ ಭರವಸೆ

ಭಾರಿ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಜನರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲು ಮೋದಿ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ

Ministry of Home Affairs
ಅಮಿತ್ ಶಾ

By

Published : Oct 15, 2020, 6:51 AM IST

ನವದೆಹಲಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

"ಭಾರೀ ಮಳೆಯ ಹಿನ್ನೆಲೆಯಲ್ಲಿ ಗೃಹ ಇಲಾಖೆ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಗತ್ಯವಿರುವ ಈ ಸಮಯದಲ್ಲಿ ಎರಡೂ ರಾಜ್ಯಗಳ ಜನರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲು ಮೋದಿ ಸರ್ಕಾರ ಬದ್ಧವಾಗಿದೆ. ಎಂದು ಅಮಿತ್ ಶಾ ಟ್ವೀಟ್​ ಮಾಡಿದ್ದಾರೆ.

ಮಳೆಯ ಕಾರಣ ಪ್ರವಾಹಕ್ಕೆ ಸಿಲುಕಿರುವ ಹೈದರಾಬಾದ್‌ನ ತಗ್ಗು ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವ ಜಿ.ಕಿಶನ್ ರೆಡ್ಡಿ ಬುಧವಾರ ಭೇಟಿ ನೀಡಿದ್ದಾರೆ.

ಮಳೆಯಿಂದ ಉಂಟಾದ ವಿನಾಶಕಾರಿ ಸನ್ನಿವೇಶಗಳಿಂದಾಗಿ ತೆಲಂಗಾಣ ಸರ್ಕಾರವು ಎಲ್ಲಾ ಖಾಸಗಿ ಸಂಸ್ಥೆಗಳು, ಕಚೇರಿಗಳು ಮತ್ತು ಅನಿವಾರ್ಯವಲ್ಲದ ಸೇವೆಗಳಿಗೆ ಬುಧವಾರ ಮತ್ತು ಗುರುವಾರ ರಜೆ ಘೋಷಿಸಿದೆ. ಸೋಮವಾರ ರಾತ್ರಿಯಿಂದ ನಿರಂತರವಾಗಿ ಸುರಿದ ಮಳೆ ಎರಡೂ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಸಿದೆ.

ABOUT THE AUTHOR

...view details