ನವದೆಹಲಿ: ವಿಶ್ವವಿದ್ಯಾನಿಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳು ಪರೀಕ್ಷೆಗಳನ್ನು ನಡೆಸಲು ಕೇಂದ್ರ ಗೃಹ ಸಚಿವಾಲಯ (ಎಂಹೆಚ್ಎ) ಸೋಮವಾರ ಅನುಮತಿ ನೀಡಿದೆ.
ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಬಗ್ಗೆ ಹಲವು ದಿನಗಳಿಂದ ಕಳವಳ ವ್ಯಕ್ತಪಡಿಸಿದ್ದರು. ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ವಿಶ್ವವಿದ್ಯಾನಿಲಯಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ಪರೀಕ್ಷೆಗಳನ್ನು ನಡೆಸಲು ಗೃಹ ಸಚಿವಾಲಯ ಅನುಮತಿಸಿರುವುದಾಗಿ ತಿಳಿಸಿದೆ.
ವಿಶ್ವವಿದ್ಯಾನಿಲಯಗಳು ಮತ್ತು ಶೈಕ್ಷಣಿಕ ಕ್ಯಾಲೆಂಡರ್ನಂತೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ (ಯುಜಿಸಿ) ಮಾರ್ಗಸೂಚಿಗಳ ಪ್ರಕಾರ, ಅಂತಿಮ ವರ್ಷದ ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದ ಕೇಂದ್ರ ಸಚಿವಾಲಯ ಅನುಮೋದಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಅನುಸರಿಸಿ ಪರೀಕ್ಷೆಗಳನ್ನು ನಡೆಸಬೇಕು ಎಂದಿದೆ.
ಕೊರೊನಾ ವೈರಸ್ ಪ್ರಕರಣಗಳು ಏರಿಕೆ ಆಗುತ್ತಿರುವ ಮಧ್ಯೆಯೂ ದೇಶಾದ್ಯಂತ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡಲು ಅಥವಾ ರದ್ದುಗೊಳಿಸುವಂತೆ ಒತ್ತಾಯಿಸುತ್ತಿದ್ದರು. ಕೆಲವು ರಾಜ್ಯಗಳು ಪರೀಕ್ಷೆಗಳನ್ನು ರದ್ದುಗೊಳಿಸಿದ್ದರೆ, ಮತ್ತೆ ಕೆಲ ರಾಜ್ಯಗಳು ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿವೆ.