ದಾಹೋಡ್: ಗುಜರಾತ್‌ನ ದಾಹೋಡ್‌ನಲ್ಲಿ ವಲಸೆ ಕಾರ್ಮಿಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದೀಗ ಖಂಗೇಲಾದಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಘಟನೆಯಿಂದಾಗಿ ಆರಕ್ಷಕರ ವಾಹನ ಸಂಪೂರ್ಣ ಹಾನಿಗೊಳಗಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಗುಜರಾತ್‌ನ ದಾಹೋಡ್‌ನಲ್ಲಿ ವಲಸಿಗರಿಂದ ಪೊಲೀಸರ ಮೇಲೆ ಕಲ್ಲು ತೂರಾಟ.. ಸರ್ಕಾರಿ ವಾಹನ ಜಖಂ..
ವಿಶೇಷ ಬಸ್ಗಳು ಹಾಗೂ ರೈಲುಗಳ ಮೂಲಕ ದೇಶದ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರ ಅಂತರರಾಜ್ಯ ಸಂಚಾರಕ್ಕೆ ಕೇಂದ್ರವು ಅನುಮತಿ ನೀಡಿದ ನಂತರವೂ ಕೆಲವು ಕಿಡಿಗೇಡಿಗಳು ಶನಿವಾರ ಗುಜರಾತ್‌ನ ದಾಹೋಡ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದಹೋದ್, ಕೆಲವು ಸಮಾಜ ಘಾತುಕರು ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನಮ್ಮ ಇಲಾಖೆಯ ಕೆಲವು ವಾಹನಗಳು ಹಾನಿಗೊಳಗಾಗಿವೆ. ಆದರೆ, ಯಾವುದೇ ದೊಡ್ಡ ಗಾಯಗಳಾಗಿಲ್ಲ. ಈವರೆಗೆ 40ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಅವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ. ಉತ್ತರಪ್ರದೇಶದ ಜನರು ಇಲ್ಲಿಗೆ ಬಂದಿದ್ದಾರೆ. ಅವರ ಸರ್ಕಾರದ ಅನುಮೋದನೆಯಂತೆ ಕಾರ್ಮಿಕರನ್ನು ಮರಳಿ ಊರಿಗೆ ತಲುಪಿಸಲು ವಾಹನದ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.
ಇಲ್ಲಿ ನಡೆದಿರುವ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದ ಅವರು, ನಾವು ಅಂತಹ ಜನರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಹಾಗೂ ಅಗತ್ಯವೆನಿಸಿದರೆ, ಸಾಮಾಜಿಕ ವಿರೋಧಿ ಚಟುವಟಿಕೆಗಳ (ಪಾಸಾ) ಅಡಿಯಲ್ಲಿ ಅವರನ್ನು ಬಂಧಿಸುತ್ತೇವೆ ಎಂದಿದ್ದಾರೆ.