ಕರ್ನಾಟಕ

karnataka

ETV Bharat / bharat

ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ: ಓರ್ವ ಉಗ್ರ, ಸ್ಥಳೀಯನ ಬಂಧನ - Two including a militant held during search operation in Pulwama

ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಮತ್ತು ಆತನಿಗೆ ಸಹಾಯ ಮಾಡುತ್ತಿದ್ದ ಓರ್ವ ಸ್ಥಳೀಯ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ
ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ

By

Published : Nov 22, 2020, 2:31 PM IST

Updated : Nov 22, 2020, 2:39 PM IST

ನವದೆಹಲಿ:ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚತ್ಪುರ ಗ್ರಾಮದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಮತ್ತು ಆತನಿಗೆ ಸಹಾಯ ಮಾಡುತ್ತಿದ್ದ ಓರ್ವ ಸ್ಥಳೀಯ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಹಂದ್ವಾರಾದ ವ್ಯಕ್ತಿಯ ಬಗ್ಗೆ ಬಂದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಿನ್ನೆ ಸಂಜೆ ಪ್ರಾರಂಭಿಸಲಾಗಿತ್ತು. ಈ ವೇಳೆ ಓರ್ವ ಉಗ್ರನನ್ನು ಹಾಗೂ ಆತನಿಗೆ ಸಹಾಯ ಮಾಡುತ್ತಿದ್ದ ಓರ್ವ ಸ್ಥಳೀಯನನ್ನು ಬಂಧಿಸಲಾಗಿದೆ ಎಂದು ಸೇನೆಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ಥಳದಲ್ಲೇ ವಿಚಾರಣೆ ನಡೆಸಿದಾಗ ಹತ್ತಿರದ ಮದರಸಾದಲ್ಲಿ ಉಗ್ರನೊಬ್ಬ ಇರುವುದು ಬಹಿರಂಗವಾಗಿದೆ ಎಂದು ಅವರು ಹೇಳಿದರು.

ಮುಂದಿನ ಶೋಧ ಕಾರ್ಯಾಚರಣೆಯಲ್ಲಿ, ಉಗ್ರನನ್ನು (ಹೆಸರನ್ನು ತಡೆಹಿಡಿಯಲಾಗಿದೆ) ಬಂಧಿಸಲಾಯಿತು, ಜಂಟಿ ಕಾರ್ಯಾಚರಣೆ ಕೊನೆಗೊಂಡಿದೆ ಎಂದು ಅವರು ಹೇಳಿದರು.

Last Updated : Nov 22, 2020, 2:39 PM IST

For All Latest Updates

ABOUT THE AUTHOR

...view details