ಶ್ರೀನಗರ (ಜಮ್ಮು ಕಾಶ್ಮೀರ):ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳಿರುವಂತೆ ಭಯೋತ್ಪಾದಕರ ಎರಡು ಅಡಗುದಾಣಗಳನ್ನು ಭದ್ರತಾ ಪಡೆಗಳು ಜಮ್ಮು ಕಾಶ್ಮೀರ ಪುಲ್ವಾಮಾ ಜಿಲ್ಲೆಯಲ್ಲಿ ನಾಶಪಡಿಸಿ, ಅಪಾರ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
ಭಾರತೀಯ ಸೇನೆ ಹಾಗೂ ಜಮ್ಮುಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್ ಎ ತೋಯ್ಬಾದ ಎರಡು ಅಡಗುದಾಣಗಳನ್ನು ನಾಶಪಡಿಸಲಾಗಿದೆ. ಆವಂತಿಪೋರಾದ ಬಳಿಯಿರುವ ಬದ್ರೂ ಕಾಡುಗಳಲ್ಲಿ ಉಗ್ರರಿರುವ ಬಗ್ಗೆ ಸುಳಿವು ಸಿಕ್ಕಿದ್ದು, ಬುಧವಾರ ರಾತ್ರಿ ಶೋಧ ಕಾರ್ಯಾಚರಣೆ ಆರಂಭವಾಗಿತ್ತು ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.