ಲಡಾಖ್ :ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ ನಂತರ ಲಡಾಖ್‌ನ ಲೇಹ್‌ನಲ್ಲಿ ಮಿಲಿಟರಿ ಹೆಲಿಕಾಪ್ಟರ್ ಮತ್ತು ಫೈಟರ್ ಜೆಟ್ಗಳ ಚಟುವಟಿಕೆ ಹೆಚ್ಚಾಗಿ ಕಂಡು ಬಂದಿದೆ.
ಚೀನಾದೊಂದಿಗಿನ ಗಡಿ ಬಿಕ್ಕಟ್ಟು ಮತ್ತು ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗೆ ಹಿಂಸಾತ್ಮಕ ಸಂಘರ್ಷ ನಡೆದ ಬಳಿಕ ಈ ಚಟುವಟಿಕೆಯು ಮಹತ್ವ ಪಡೆದುಕೊಂಡಿದೆ. ಭಾರತೀಯ ವಾಯುಪಡೆಯ ಸುಖೋಯ್ -30 ಎಂಕೆಐ, ಮಿರಾಜ್ 2000 ಮತ್ತು ಜಾಗ್ವಾರ್ ಫೈಟರ್ ಏರ್ಕ್ರಾಫ್ಟ್ಗಳನ್ನು ಸುಧಾರಿತ ಜಾಗಗಳಿಗೆ ಸ್ಥಳಾಂತರಿಸಿದೆ.