ನವದೆಹಲಿ:ಲಾಕ್ಡೌನ್ನಿಂದಾಗಿ ರೈತರು ಬೆಳೆದಿರುವ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಆದರೆ, ಈ ನಡುವೆ ಕಬ್ಬು ಬೆಳೆಗಾರರ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ರಾಜ್ಯಸರ್ಕಾರಗಳು ಕಬ್ಬಿಗೆ ನಿಗದಿಪಡಿಸಿದ ಬೆಲೆ ಹೆಚ್ಚಿದ್ದರೆ, ಈ ಮೊದಲು ಕೇಂದ್ರ ಸರ್ಕಾರ ನಿಗದಿ ಮಾಡಿರುವ ಕನಿಷ್ಠ ಬೆಂಬಲ ಬೆಲೆ ಸಹ ಅನ್ವಯವಾಗಲಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಈ ವಿಚಾರಣೆಯನ್ನು ಉನ್ನತ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠ ರಾಜ್ಯವು ನಿಗದಿಪಡಿಸಿದ ಬೆಲೆ ಹೆಚ್ಚಿದ್ದರೆ, ಕೇಂದ್ರವು ನಿಗದಿಪಡಿಸಿದ ಕನಿಷ್ಠ ಬೆಲೆ ಅನ್ವಯವಾಗುತ್ತದೆ ಎಂದು ತಿಳಿಸಿದೆ.