ನವದೆಹಲಿ: ಜುಲೈ 12ರಂದು ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಭೇಟಿ ಮಾಡಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇದೀಗ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.
ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾಗೆ ಕೊರೊನಾ ದೃಢಪಟ್ಟಿದ್ದರಿಂದ ಕೇಂದ್ರ ಸಚಿವರು ಕ್ವಾರಂಟೈನ್ ಆಗಿರುವುದಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಬಿಜೆಪಿ ಅಧ್ಯಕ್ಷರೊಂದಿಗೆ ಕೆಲ ಹೊತ್ತು ಕಳೆದಿರುವ ಕಾರಣ ತಮಗೂ ಸೋಂಕು ತಗುಲಿರಬಹುದು ಎಂಬ ಕಾರಣಕ್ಕಾಗಿ ಅವರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಸಚಿವರು ಹಾಗು ಕುಟುಂಬ ಸದಸ್ಯರೂ ಕೂಡಾ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ದೊರೆತಿದೆ.
ರವೀಂದ್ರ ರೈನಾ ಈಗಾಗಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.