ನವದೆಹಲಿ:ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನಿಡುವ ಸಂವಿಧಾನದ 370ನೇ ವಿಧಿಯನ್ನ ರದ್ದುಗೊಳಿಸಲಾಗಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯ.. ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ: ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಇಲಾಖೆ ಆದೇಶ - ಗೃಹ ಸಚಿವ ಅಮಿತ್ ಶಾ ಘೋಷಣೆ
ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಗೃಹ ಇಲಾಖೆ ಆದೇಶ
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಪೊಲೀಸ್ ಕಮಿಷನರ್ಗಳಿಗೆ ಕೆಂದ್ರ ಗೃಹ ಇಲಾಖೆ ಮುನ್ನೆಚ್ಚರಿಕೆಯಿಂದಿರುವಂತೆ ಅದೇಶಿಸಿದೆ.
ಈ ಕೂಡಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೇಕಾಗುವ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳಿರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗ ವಹಿಸುವಂತೆ ಆದೇಶ ಹೊರಡಿಸಿಲಾಗಿದೆ.