ಶಾಮ್ಲಿ (ಉತ್ತರ ಪ್ರದೇಶ):ಪಕ್ಕದ ಮನೆಯ ವ್ಯಕ್ತಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಬಾಲಕಿಯೊಬ್ಬಳು ಆರೋಪಿಸಿದ್ದಾಳೆ.
ನೆರೆಮನೆ ವ್ಯಕ್ತಿಯಿಂದ ಬಾಲಕಿ ಮೇಲೆ ಅತ್ಯಾಚಾರ - ಪಕ್ಕದ ಮನೆಯವನಿಂದ ಬಾಲಕಿ ಮೇಲೆ ಅತ್ಯಾಚಾರ
ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಬಾಲಕಿಯೊಬ್ಬಳು ತನ್ನ ಪಕ್ಕದ ಮನೆಯ ವ್ಯಕ್ತಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿದ್ದು, ಪರಾರಿಯಾದ ವ್ಯಕ್ತಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪಕ್ಕದ ಮನೆಯವನಿಂದ ಬಾಲಕಿ ಮೇಲೆ ಅತ್ಯಾಚಾರ
ಬಾಲಕಿಯ ತಂದೆ ಮತ್ತು ಸಹೋದರ ಮನೆಯಿಂದ ಹೊರಗಿದ್ದಾಗ ಆರೋಪಿ, ಬಾಲಕಿಗೆ ಆಮಿಷವೊಡ್ಡಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಘಟನೆಯನ್ನು ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದಾಳೆ. ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೇರಿದಂತೆ ಐಪಿಸಿಯ ಸೆಕ್ಷನ್ 363 ಮತ್ತು 376 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಾಗಿ ಬಲೆ ಬೀಸಿರುವ ಪೊಲೀಸರು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ.