ಕರ್ನಾಟಕ

karnataka

ETV Bharat / bharat

ಉತ್ತರ ಪ್ರದೇಶದದಲ್ಲಿ ಮತ್ತೊಂದು ಮಾನಗೇಡಿ ಘಟನೆ; ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ - ಉತ್ತರ ಪ್ರದೇಶದ ಸಾಮೂಹಿಕ ಅತ್ಯಾಚಾರ ಪ್ರಕರಣ

ಉತ್ತರ ಪ್ರದೇಶ ಮತ್ತೊಂದು ಭೀಕರ ಲೈಂಗಿಕ ದೌರ್ಜನ್ಯದಕ್ಕೆ ಸಾಕ್ಷಿಯಾಗಿದೆ. ದಲಿತ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿದ ದುಷ್ಕರ್ಮಿಗಳು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗುತ್ತಿದೆ. ಘಟನೆ ಬಳಿಕ ಇಬ್ಬರು ಕಾರ್ಮಿಕರನ್ನು ಪೊಲೀಸರಿಗೆ ಜೈಲಿಗೆ ಕಳಿಸಿದ್ದಾರೆ.

Minor Dalit girl abducted and raped in Uttar Pradesh's Ambedkar Nagar
ಸಾಂದರ್ಭಿಕ ಚಿತ್ರ

By

Published : Nov 30, 2020, 8:20 PM IST

ಅಂಬೇಡ್ಕರ್ ನಗರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ಅಪ್ರಾಪ್ತ ದಲಿತ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಲಾಗಿದೆ. ಇಬ್ಬರು ಕಾಮುಕರು ಈ ಅಟ್ಟಹಾಸ ಮೆರೆದಿದ್ದಾರೆ ಎನ್ನಲಾಗುತ್ತಿದ್ದು ಇಬ್ಬರನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದಾಗ ಬಾಲಕಿಯನ್ನು ಬಲವಂತದಿಂದ ಅಪಹರಿಸಿ ಹೊಲಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಬಳಿಕ ಕಾಮುಕರು ಸ್ಥಳದಿಂದ ಪರಾರಿಯಾಗಿದ್ದರು. ಪೊಲೀಸರು ಪತ್ತೆ ಹಚ್ಚಿ ಇಬ್ಬರು ಕಾಮುಕರನ್ನು ಬಂಧಿಸಿದ್ದಾರೆ.

ಬಾಲಕಿಯು ಮನೆಗೆ ಬಂದು ಘಟನೆ ಬಗ್ಗೆ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಬಾಲಕಿಯ ಪೋಷಕರು ಈ ಬಗ್ಗೆ ದೂರು ನೀಡಿದ್ದು ಈ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಗ್ಯಾಂಗ್​ ರೇಪ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕರು

ತನಿಖೆ ತೀವ್ರಗೊಳಿಸಿದ್ದ ಪೊಲೀಸರು, ಬಾಲಕಿಯ ಮೇಲೆ ಅಟ್ಟಹಾಸ ಮೆರೆದು ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಅಲೋಕ್ ಪ್ರಿಯದರ್ಶಿ ತಿಳಿಸಿದ್ದಾರೆ. ಗೊತ್ತಿದ್ದವರೇ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ.

ABOUT THE AUTHOR

...view details