ಕರ್ನಾಟಕ

karnataka

ETV Bharat / bharat

ಯುಪಿಯಲ್ಲಿ ನಿಲ್ಲದ ಹೀನ ಕೃತ್ಯ: ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ! - ಉತ್ತರ ಪ್ರದೇಶ ಸಾಮೂಹಿಕ ಅತ್ಯಾಚಾರ

ಪಿಲಿಭಿತ್ ಜಿಲ್ಲೆಯಲ್ಲಿ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಬಾಲಕಿಗಾಗಿ ಪೊಲೀಸರು ಶೋಧ ನಡೆಸಿ, ಆಕೆಯನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

justice
justice

By

Published : Oct 3, 2020, 8:20 AM IST

Updated : Oct 3, 2020, 12:05 PM IST

ಪಿಲಿಭಿತ್ (ಉತ್ತರ ಪ್ರದೇಶ): ಯುಪಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ರಾಜ್ಯದ ಪಿಲಿಭಿತ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಬಿಸಾಲ್​ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ವರದಿಗಳು ತಿಳಿಸಿವೆ.

ಬಾಲಕಿಗಾಗಿ ಪೊಲೀಸರು ಶೋಧ ನಡೆಸಿ, ಆಕೆಯನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

"ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಲಭ್ಯವಿರುವ ಎಲ್ಲಾ ಸಾಕ್ಷ್ಯಗಳ ಆಧಾರದ ಮೇಲೆ ಶೀಘ್ರದಲ್ಲಿಯೇ ಕಠಿಣ ಕ್ರಮ ಕೈಗೊಳ್ಳುತ್ತೇವೆ" ಎಂದು ಪೊಲೀಸ್ ವರಿಷ್ಠಾಧಿಕಾರಿ ಜೈ ಪ್ರಕಾಶ್ ಯಾದವ್ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹಲವಾರು ಭೀಕರ ದೌರ್ಜನ್ಯಗಳು ನಡೆದಿರುವುದು ವರದಿಯಾಗಿದೆ. ಅತ್ಯಾಚಾರಕ್ಕೊಳಗಾದ ಹದಿನೈದು ದಿನಗಳ ನಂತರ ಹಥ್ರಾಸ್ ಮೂಲದ 19 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಇಬ್ಬರು ಪುರುಷರಿಂದ ಅತ್ಯಾಚಾರಕ್ಕೊಳಗಾದ ಬಲರಾಂಪುರದ 22 ವರ್ಷದ ಯುವತಿ ಮೃತಪಟ್ಟಿದ್ದಾಳೆ.

Last Updated : Oct 3, 2020, 12:05 PM IST

ABOUT THE AUTHOR

...view details