ಹೈದರಾಬಾದ್:9 ವರ್ಷದ ಬಾಲಕಿ ಮೇಲೆ ಮೂವರು ಕಾಮುಕರು ಸತತ ಮೂರು ದಿನಗಳ ಕಾಲ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ತೆಲಂಗಾಣದ ಕರೀಂನಗರದಲ್ಲಿ ನಡೆದಿದ್ದು, ಘಟನೆಯಿಂದ ಆಘಾತಕ್ಕೊಳಗಾಗಿರುವ ಬಾಲಕಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ.
ಅಪ್ರಾಪ್ತೆ ಮೇಲೆ ಮೂವರು ಕಾಮುಕರಿಂದ ಅತ್ಯಾಚಾರ - ಮೂವರು ಕಾಮುಕರು ರೇಪ್
ಮೂವರು ಕಾಮುಕರು ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ತೆಲಂಗಾಣದ ಕರೀಂನಗರದಲ್ಲಿ ನಡೆದಿದ್ದು, ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅತ್ಯಾಚಾರವೆಸಗಿರುವವರ ಪೈಕಿ ಓರ್ವ ಅಪ್ರಾಪ್ತ ಎಂದು ಹೇಳಲಾಗುತ್ತಿದ್ದು, ಮತ್ತಿಬ್ಬರು 20-21 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ. ಅಪ್ರಾಪ್ತೆ ವಾಸವಾಗಿದ್ದ ಮನೆಯ ಪಕ್ಕದಲ್ಲೇ ಇವರ ಮನೆಗಳಿದ್ದು, ಬಾಲಕಿ ಹೊರಗಡೆ ಆಟ ಆಡುತ್ತಿದ್ದ ವೇಳೆ ಆಕೆಯನ್ನ ಕರೆದುಕೊಂಡು ಹೋಗಿರುವ ಕಾಮುಕನೋರ್ವ ಅತ್ಯಾಚಾರವೆಸಗಿದ್ದಾನೆ. ಇದೇ ವೇಳೆ ಆತನೊಂದಿಗೆ ಹೋಗಿರುವ ಮತ್ತಿಬ್ಬರು ಬಾಲಕಿ ಮೇಲೆ ದುಷ್ಕೃತ್ಯವೆಸಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾಳೆ. ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗಾಗಿ ದಾಖಲು ಮಾಡಲಾಗಿದ್ದು, ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಅತ್ಯಾಚಾರವೆಸಗಿರುವ ದುಷ್ಕರ್ಮಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.