ಕರ್ನಾಟಕ

karnataka

ETV Bharat / bharat

ಅಪ್ರಾಪ್ತೆ ಮೇಲೆ ಅತ್ಯಾಚಾರ; ಯುವಕನ ವಿರುದ್ಧ ದೂರು

ನಿಗೋಹಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳ್ಳಿಯ ನಿವಾಸಿಯೊಬ್ಬ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಪೋಕ್ಸೊ ಕಾಯ್ದೆ ಮತ್ತು ಐಪಿಸಿಯ ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

By

Published : Feb 8, 2021, 6:51 PM IST

ಶಹಜಹಾನ್ಪುರ: ಅಪ್ರಾಪ್ತ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ನಿಗೋಹಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳ್ಳಿಯ ನಿವಾಸಿಯೊಬ್ಬ ಬಾಲಕಿಯ ಮೇಲೆ ಫೆಬ್ರವರಿ 4 ರಂದು ಅತ್ಯಾಚಾರ ಎಸಗಿದ್ದಾನೆ ಎಂದು ಪುವಾಯಾದ ಸರ್ಕಲ್ ಅಧಿಕಾರಿ ಮಹೇಂದ್ರ ಪಾಲ್ ಸೋಮವಾರ ಹೇಳಿದ್ದಾರೆ. ಪೊಲೀಸರ ಪ್ರಕಾರ, ಅಪರಾಧಿ ಬಲವಂತವಾಗಿ 15 ವರ್ಷದ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಓದಿ:ಅಪ್ರಾಪ್ತೆ ಮೇಲೆ ಅತ್ಯಾಚಾರ: ಬಾಲಕಿಗೆ ಬೆಂಕಿ ಇಟ್ಟು ಕೊಂದ ಪಾಪಿಗಳು

ಬಾಲಕಿ ತನ್ನ ಅತ್ತಿಗೆಯೊಂದಿಗೆ ವಾಸಿಸುತ್ತಿದ್ದು, ಆಕೆಯ ತಂದೆ ಮತ್ತು ಸಹೋದರ ಹಿಮಾಚಲ ಪ್ರದೇಶದಲ್ಲಿ ಕೆಲಸ ಮಾಡುತ್ತಾರೆ ಎಂದು ಮಹೇಂದ್ರ ಪಾಲ್ ಹೇಳಿದರು. ಬಾಲಕಿಯ ತಂದೆ ಸ್ವಗ್ರಾಮಕ್ಕೆ ಬಂದ ನಂತರ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಕ್ಕಳ ಮೇಲೆ ಲೈಂಗಿಕ ಅಪರಾಧ (ಪೋಕ್ಸೊ) ಕಾಯ್ದೆ ಮತ್ತು ಐಪಿಸಿಯ ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪಾಲ್ ಹೇಳಿದ್ದಾರೆ.

ABOUT THE AUTHOR

...view details