ಮಲಪ್ಪುರಂ: 12 ವರ್ಷ ವಯಸ್ಸಿನ ಬಾಲಕಿ ಮೇಲೆ 30 ಜನ ಸತತ 2 ವರ್ಷಗಳಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಆರೋಪ ಪ್ರಕರಣ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದೇವರ ನಾಡಲ್ಲಿ ದುಷ್ಕೃತ್ಯ: ಬಾಲಕಿ ಮೇಲೆ 30 ಜನರಿಂದ ನಿರಂತರ ಲೈಂಗಿಕ ದೌರ್ಜನ್ಯ! - ಕೇರಳ
ಕೇರಳದಲ್ಲಿ ಅಪ್ರಾಪ್ತ ಬಾಲಕಿ ಮೇಲೆ 30 ಜನ 2 ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರನ್ನ ಬಂಧಿಸಲಾಗಿದೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಘಟನೆ ಸಂಬಂಧ ಪೊಲೀಸರು ಹೆಚ್ಚಿನ ಮಾಹಿತಿಯನ್ನ ಬಹಿರಂಗಪಡಿಸಿಲ್ಲ. ಮಕ್ಕಳ ಸಹಾಯವಾಣಿಯಿಂದ ಬಂದ ಮಾಹಿತಿಯಿಂದ ಪ್ರಕರಣ ಬೆಳಕಿಗೆ ಬಂದಿದೆ. 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈಗಾಗಲೇ ಇಬ್ಬರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಕುರಿತು ಮಾಹಿತಿ ತಿಳಿದುಬಂದಿದೆ.
ನ್ಯಾಯಾಲಯದ ಮುಂದೆ ಹಾಜರಾಗಿದ್ದ ಬಾಲಕಿ ತನ್ನ ಹೇಳಿಕೆಯನ್ನ ನೀಡಿದ್ದಾಳೆ. ಅಲ್ಲದೆ ಪ್ರಕರಣದಲ್ಲಿ ತಂದೆಯ ಪಾತ್ರವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.