ನವದೆಹಲಿ :ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ನೂತನ ಕೃಷಿ ಕಾನೂನುಗಳ ಬಗ್ಗೆ ಅರಿವಿಲ್ಲ. ಆದ್ದರಿಂದ ಅವರು ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಆರೋಪಿಸಿದ್ದಾರೆ.
ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡ ತೋಮರ್, ಈ ಕಾನೂನುಗಳ ಮೂಲಕ ರೈತರು ತಾವು ಬೆಳೆದ ಬೆಳೆಗಳನ್ನು ಎಲ್ಲಿಯಾದ್ರೂ, ಯಾರಿಗಾದ್ರೂ ಮಾರಬಹುದು. ಇದರಿಂದಾಗಿ ರೈತರಿಗೆ ಅನುಕೂಲವಾಗುತ್ತದೆ ಎಂದಿದ್ದಾರೆ.
ಶರದ್ ಪವಾರ್ ಒಬ್ಬ ಹಿರಿಯ ರಾಜಕಾರಣಿ ಮತ್ತು ಕೇಂದ್ರದ ಮಾಜಿ ಕೃಷಿ ಸಚಿವರಾಗಿದ್ದು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಪರಿಹಾರಗಳ ಬಗ್ಗೆ ತಿಳಿದಿದ್ದಾರೆ. ಇದೇ ಕೃಷಿ ಸುಧಾರಣೆಗಳನ್ನು ಜಾರಿಗೊಳಿಸಲೂ ಅವರು ಯತ್ನಿಸಿದ್ದರು ಎಂದು ತೋಮರ್ ಸರಣಿ ಟ್ವೀಟ್ ಮೂಲಕ ಶರದ್ ಪವಾರ್ ವಿರುದ್ಧ ಹರಿಹಾಯ್ದಿದ್ದಾರೆ.