ಶ್ರೀನಗರ (ಜಮ್ಮು& ಕಾಶ್ಮೀರ):ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಮಾಂಡರ್ ರಿಯಾಜ್ ನಾಯಕೂ ಮತ್ತು ಇನ್ನೋರ್ವ ಉಗ್ರನನ್ನು ಎನ್ಕೌಂಟರ್ ಮಾಡಲಾಗಿದೆ. ಈ ಹಿನ್ನೆಲೆ, ಕಾಶ್ಮೀರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಇಂದು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಎನ್ಕೌಂಟರ್: ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತ
ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ನನ್ನು ಎನ್ಕೌಂಟರ್ ಮೂಲಕ ಭಾರತೀಯ ಸೇನೆ ಹತ್ಯೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆಗಳನ್ನ ಸ್ಥಗಿತಗೊಳಿಸಲಾಗಿದೆ.
: ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ
ಈ ಗುಂಡಿನ ಚಕಮಕಿಯಿಂದಾಗಿ ಹಾಗೂ ಯಾವುದೇ ಅಹಿತಕರ ಘಟೆನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಬೀಗ್ಪೊರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದರಿಂದ ಸದ್ಯ ವಾತಾವರಣ ತಿಳಿಗೊಂಡಿಲ್ಲ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
Last Updated : May 6, 2020, 5:23 PM IST