ನವದೆಹಲಿ:ಮೋದಿ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷವು ಐತಿಹಾಸಿಕ ಸಾಧನೆಗಳಿಂದ ಕೂಡಿದೆ ಎಂದು ಬಿಜೆಪಿ ಹಿರಿಯ ನಾಯಕರು ಹೇಳಿದ್ದಾರೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಒಂದು ವರ್ಷದಲ್ಲಿ ಕಠಿಣ ಮತ್ತು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರು ವರ್ಷಗಳ ಅಧಿಕಾರಾವಧಿಯಲ್ಲಿ ಅನೇಕ 'ಐತಿಹಾಸಿಕ ತಪ್ಪುಗಳನ್ನು' ಸರಿಪಡಿಸಲಾಗಿದೆ. ಅಭಿವೃದ್ಧಿಯ ಹಾದಿಯಲ್ಲಿರುವ ಸ್ವಾವಲಂಬಿ ಭಾರತಕ್ಕೆ ಅಡಿಪಾಯ ಹಾಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.