ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘನೆ ವ್ಯಕ್ತಪಡಿಸಿದ್ದು, ಅಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ಮೋದಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.
ಚೊಚ್ಚಲ ಡಿಡಿಸಿ ಚುನಾವಣೆಯಲ್ಲಿ ಬಿಜೆಪಿಯನ್ನು ಏಕೈಕ ಅತಿದೊಡ್ಡ ಪಕ್ಷವೆಂದು ಮತ ಚಲಾಯಿಸಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರನ್ನು ಶ್ಲಾಘಿಸಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
"ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವವನ್ನು ಪುನಃ ಸ್ಥಾಪಿಸಲು ಮೋದಿ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಡಿಡಿಸಿ ಚುನಾವಣೆಯಲ್ಲಿ ಬಿಜೆಪಿಗೆ ಜನ ಮತ ಚಲಾಯಿಸಿದ್ದಾರೆ. ಇದು ಬಿಜೆಪಿ ಹಾಗೂ ಪ್ರಜಾಪ್ರಭುತ್ವದ ಮೇಲಿನ ಅವರ ನಂಬಿಕೆಯನ್ನು ತೋರುತ್ತದೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
"ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿ ಬಿಜೆಪಿಯನ್ನು ಏಕೈಕ ಅತಿದೊಡ್ಡ ಪಕ್ಷವಾಗಿ ನಿರ್ಮಿಸಲು ಮತ ಚಲಾಯಿಸಿದ್ದಕ್ಕಾಗಿ ಜಮ್ಮು ಕಾಶ್ಮೀರದ ನಮ್ಮ ಸಹೋದರ-ಸಹೋದರಿಯರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಈ ಪ್ರದೇಶದ ಏಳಿಗೆ ಮತ್ತು ಅಭಿವೃದ್ಧಿಗೆ ಪಟ್ಟುಬಿಡದೆ ಬಿಜೆಪಿ ಕೆಲಸ ಮಾಡುತ್ತದೆ" ಅವರು ಹೇಳಿದರು.