ಕರ್ನಾಟಕ

karnataka

ETV Bharat / bharat

ದೇವೇಗೌಡರಿಗೆ ಶುಭ ಕೋರಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ - ಮಾಜಿ ಪ್ರಧಾನಿ ದೇವೇಗೌಡ ಜನ್ಮದಿನ

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಅವರ ಜನ್ಮದಿನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಶುಭ ಕೋರಿದ್ದಾರೆ.

Modi greets former PM Deve Gowda on birthday
ದೇವೇಗೌಡರಿಗೆ ಶುಭಕೋರಿದ ಪ್ರಧಾನಿ ಮೋದಿ

By

Published : May 18, 2020, 11:00 AM IST

ನವದೆಹಲಿ:ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಹುಟ್ಟುಹಬ್ಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮೊದಿ, ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಜನ್ಮ ದಿನದ ಶುಭಾಶಯಗಳು. ಅವರ ಉತ್ತಮ ಜೀವನ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹೆಚ್​ಡಿಡಿಗೆ ಶುಭ ಕೋರಿದ್ದಾರೆ. ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಉತ್ತಮ ಆರೋಗ್ಯ ಮತ್ತು ಸಂತೋಷಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಕೂಡ ಹೆಚ್​ಡಿಡಿ ಜನ್ಮದಿನಕ್ಕೆ ಶುಭ ಕೋರಿದ್ದಾರೆ.

ABOUT THE AUTHOR

...view details