ಕರ್ನಾಟಕ

karnataka

ETV Bharat / bharat

ಇಂದು, ನಾಳೆ ಎಲ್ಲ ರಾಜ್ಯದ ಸಿಎಂಗಳ ಜೊತೆ ಪಿಎಂ ಮೋದಿ ವಿಡಿಯೋ ಕಾನ್ಫರೆನ್ಸ್‌!

ಇಂದು ಮತ್ತು ನಾಳೆ ಎಲ್ಲ ರಾಜ್ಯದ ಸಿಎಂಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್​ ಗವರ್ನರ್​ಗಳ ಜೊತೆ ಪಿಎಂ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಕೊರೊನಾ ಹಾವಳಿ ಕುರಿತು ಮಾಹಿತಿ ಕಲೆ ಹಾಕಲಿದ್ದಾರೆ.

modi meeting with cms, modi meeting with cms on corona controlling, modi meeting with cms news, ಇಂದು ಸಿಎಂಗಳ ಜೊತೆ ಮೋದಿ ಚರ್ಚೆ, ಕೊರೊನಾ ಕುರಿತು ಇಂದು ಸಿಎಂಗಳ ಜೊತೆ ಮೋದಿ ಚರ್ಚೆ,  ಇಂದು ಸಿಎಂಗಳ ಜೊತೆ ಮೋದಿ ಚರ್ಚೆ ಸುದ್ದಿ,
ಸಂಗ್ರಹ ಚಿತ್ರ

By

Published : Jun 16, 2020, 6:30 AM IST

ನವದೆಹಲಿ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಲಿದ್ದಾರೆ.

ಪಂಜಾಬ್‌, ಕೇರಳ, ಗೋವಾ, ಉತ್ತರಾಖಂಡ ಸೇರಿದಂತೆ ಇನ್ನಿತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳು ಹಾಗೂ ಆಡಳಿತಾಧಿಕಾರಿಗಳ ಜತೆ ಮೋದಿ ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ.

ನಾಳೆ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಗುಜರಾತ್‌, ಬಿಹಾರ, ಉತ್ತರ ಪ್ರದೇಶ ಸೇರಿದಂತೆ 15 ರಾಜ್ಯಗಳು ಮತ್ತು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಚರ್ಚಿಸಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಸಿಎಂ ಮತ್ತು ಲೆಫ್ಟಿನೆಂಟ್​ ಗವರ್ನರ್​ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಮಾಹಿತಿ ಕಲೆ ಹಾಕಲಿದ್ದಾರೆ.

ABOUT THE AUTHOR

...view details