ನವದೆಹಲಿ: ಹಾಕಿಪಟು ಮತ್ತು ಪದ್ಮಶ್ರೀ ಬಲ್ಬೀರ್ ಸಿಂಗ್ (95) ಅವರ ನಿಧನಕ್ಕೆ ಗೃಹ ಸಚಿವ ಅಮಿತ್ ಶಾ ತೀವ್ರ ಸಂತಾಪ ಸೂಚಿಸಿದ್ದಾರೆ.
ಬಲ್ಬೀರ್ ಸಿಂಗ್ ಅವರು 1948ರ ಲಂಡನ್ ಒಲಿಂಪಿಕ್ಸ್, 1952ರ ಹೆಲ್ಸಿಂಕಿ ಒಲಿಂಪಿಕ್ಸ್ ಮತ್ತು 1956ರ ಮೆಲ್ಬೋರ್ನ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಭಾರತ ತಂಡದ ಸದಸ್ಯರಾಗಿದ್ದರು. ತೀವ್ರ ಉಸಿರಾಟದ ತೊಂದರೆ, ಹೃದಯಾಘಾತಕ್ಕೂ ಒಳಗಾಗಿದ್ದ ಸಿಂಗ್ ಅವರು, ಮೇ 18ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಸ್ಪಂದಿಸದೇ ಇಂದು ಬೆಳಗ್ಗೆ 6.30ರ ಸುಮಾರಿಗೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಮೃತಪಟ್ಟರು.
ಇದನ್ನೂ ಓದಿ...ಹಾಕಿ ಲೆಜೆಂಡ್ ಬಲ್ಬೀರ್ ಸಿಂಗ್ ನಿಧನಕ್ಕೆ ಕಂಬನಿ ಮಿಡಿದ ಕ್ರೀಡಾ ದಿಗ್ಗಜರು
ಬಲ್ಬೀರ್ ಸಿಂಗ್ ಅವರು ಕ್ರೀಡಾ ಪ್ರದರ್ಶನದ ಮೂಲಕ ದೇಶಕ್ಕೆ ಅಪಾರ ಕೀರ್ತಿ ತಂದುಕೊಟ್ಟಿದ್ದಾರೆ. ಅವರೊಬ್ಬ ಅದ್ಭುತ ಹಾಕಿ ಆಟಗಾರ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಉತ್ತಮ ತರಬೇತುದಾರರಾಗಿಯೂ ಗುರುತಿಸಿಕೊಂಡಿದ್ದರು. ಅವರ ನಿಧನ ಬಹಳ ನೋವುಂಟು ಮಾಡಿದೆ. ಕುಟುಂಬದವರು ಮತ್ತು ಹಿತೈಷಿಗಳಿಗೆ ನನ್ನ ಸಾಂತ್ವನ ಎಂದು ಟ್ವಿಟರ್ನಲ್ಲಿ ಮೋದಿ ಸಂತಾಪ ಸೂಚಿಸಿದ್ದಾರೆ.
ಬಲ್ಬೀರ್ ಸಿಂಗ್ ಅವರ ನಿಧನದ ಬಗ್ಗೆ ತಿಳಿದು ದುಃಖ ತಪ್ತನಾಗಿದ್ದೇನೆ. ಮೂರು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಬಲ್ಬೀರ್ ಅವರನ್ನು ಭೇಟಿ ಮಾಡುವ ಅದೃಷ್ಟ ನನ್ನದಾಗಿತ್ತು. ಅವರ ಕುಟುಂಬಕ್ಕೆ ನನ್ನ ಸಂತಾಪ ಎಂದು ಅಮಿತ್ ಶಾ ಹೇಳಿದ್ದಾರೆ.