ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೂರು ದಿನಗಳ 'ಇಂಡಿಯನ್ ಮೊಬೈಲ್ ಕಾಂಗ್ರೆಸ್-2020 (ಐಎಂಸಿ-2020) ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ.
ಮಂಗಳವಾರ ಬೆಳಗ್ಗೆ 10.45ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಆತ್ಮನಿರ್ಭರ್ ಭಾರತ್, ಡಿಜಿಟಲೀಕರಣ ಮತ್ತು ಸುಸ್ಥಿರ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಆವಿಷ್ಕಾರಕ್ಕೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತದೆ.
ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ ಮತ್ತು ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಸಿಒಎಐ) ಈ ಕಾರ್ಯಕ್ರಮವನ್ನು ಆಯೋಜಿಲಾಗುತ್ತಿದ್ದು, ಇದು ಮೂರು ದಿನಗಳ ಕಾಲ ಅಂದರೆ ಡಿಸೆಂಬರ್ 8ರಿಂದ 10ರವರೆಗೆ ನಡೆಯಲಿದೆ.