ಶ್ರೀನಗರ:ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ/ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಫಾರೂಕ್ ಅಬ್ದುಲ್ಲಾ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎ- ಸ್ಯಾಟಲೈಟ್ ಉಡಾವಣೆ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕು. ಅವರ ಅಧಿಕಾರಾವಧಿಯಲ್ಲಿ ಉಪಗ್ರಹ ನಿರೋಧಕ ಕ್ಷಿಪಣಿ ಯೋಜನೆ ರೂಪಗೊಂಡಿದ್ದು, ಸಂಪೂರ್ಣವಾಗಿ ಕಾರ್ಯಗತಗೊಂಡಿದ್ದು ಎಂದು ಹೇಳಿದ್ದಾರೆ.
ಬಡಗಾಮ್‌ನಲ್ಲಿ ಎಂಐ-17 ಸುಧಾರಿತ ಹೆಲಿಕಾಪ್ಟರ್‌ವೊಂದು ಪತನಗೊಂಡು ಆರು ಯೋಧರು ಸೇರಿ ಓರ್ವ ನಾಗರಿಕ ಮೃತಪಟ್ಟಿದ್ದರು. ಇದೇ ರೀತಿಯ ಬಟನ್ ಒತ್ತಿ ಘಟನೆ ನಡೆದಿರಬಹುದೆಂದು ಆಶ್ಚರ್ಯ ವ್ಯಕ್ತವಾಗುತ್ತದೆ ಎಂದು ಅಣುಕಿಸಿದ್ದಾರೆ.
ಮೋದಿ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದ್ದಾರೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಆ ಉದ್ಯೋಗಗಳು ಎಲ್ಲಿವೆ?, ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ದರ ಕಡಿಮೆ ಮಾಡುವ ಭರವಸೆ ನೀಡಿದರು. ಆದರೂ ಏನೂ ಆಗಿಲ್ಲ ಎಂದು ಟೀಕಿಸಿದ್ದಾರೆ.
ಈ ಹಿಂದೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಬಿಜೆಪಿಯ ಮುಖ್ಯ ಕಾರ್ಯಸೂಚಿಯಾಗಿತ್ತು. ಏರ್ಸ್ಟ್ರೈಕ್ ಬಳಿಕ ಅದನ್ನು ಮರೆತು ಹೋಗಿದ್ದಾರೆ ಎಂದು ಫಾರೂಕ್ ಕಿಡಿಕಾರಿದರು.