ನವದೆಹಲಿ:ನೈರುತ್ಯ ಮಾನ್ಸೂನ್ ಮಾರುತಗಳು ಜೂನ್ 1ರಂದು ಕೇರಳಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 1ರಂದು ಕೇರಳಕ್ಕೆ ಎಂಟ್ರಿ ಕೊಡಲಿದೆ ಮುಂಗಾರು - ಮಾನ್ಸೂನ್ ಮಾರುತಗಳು ಲೇಟೆಸ್ಟ್ ನ್ಯೂಸ್
ಜೂನ್ 5ರ ಬದಲು ಜೂನ್ 1ರಂದು ಮಾನ್ಸೂನ್ ಕೇರಳ ರಾಜ್ಯ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮೇ 15ರಂದು ನೀಡಿದ್ದ ಮುನ್ಸೂಚನೆಯಲ್ಲಿ ಮಾನ್ಸೂನ್ ಸಾಮಾನ್ಯ ಆಗಮನದ ನಾಲ್ಕು ದಿನಗಳ ನಂತರ ಅಂದರೆ ಜೂನ್ 5ರಂದು ದಕ್ಷಿಣ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತದಿಂದಾಗಿ ಮಾನ್ಸೂನ್ ಮಾರುತಗಳು ಜೂನ್ 1ರಂದು ಕೇರಳ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಮಾನ್ಸೂನ್ ವೇಗಕ್ಕೆ ಸಹಾಯ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಮೇ 31ರಿಂದ ಜೂನ್ 4ರವರೆಗೆ ಆಗ್ನೇಯ ಮತ್ತು ಪಕ್ಕದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಸಾಧ್ಯತೆಯಿದೆ. ಹೀಗಾಗಿ ನೈರುತ್ಯ ಮಾನ್ಸೂನ್ ಮಾರುತಗಳು ಜೂನ್ 1ರಂದು ಕೇರಳಕ್ಕೆ ಆಗಮಿಸಲು ಅನುಕೂಲಕರ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.