ನವದೆಹಲಿ:ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಸಂಸತ್ ಮುಂಗಾರು ಅಧಿವೇಶನಕ್ಕೆ ಆಗಮಿಸಿರುವ 17 ಸಂಸದರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ಸಂಸತ್ ಅಧಿವೇಶನಕ್ಕೆ ಬಂದ ಅನಂತ್ ಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೊರೊನಾ ದೃಢ
ಇಂದಿನಿಂದ ಆರಂಭವಾಗಿರುವ ಸಂಸತ್ ಮುಂಗಾರು ಅಧಿವೇಶನಕ್ಕೆ ಆಗಮಿಸಿರುವ 17 ಸಂಸದರ ಕೋವಿಡ್ ವರದಿ ಪಾಸಿಟಿವ್ ಬಂದಿದೆ.
ಕೊರೊನಾ ಮಾನದಂಡಗಳೊಂದಿಗೆ ಸಂಸತ್ತಿನ ಮಾನ್ಸೂನ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಒಟ್ಟು 359 ಸದಸ್ಯರು ಭಾಗಿಯಾಗಿದ್ದರು. ಅಧಿವೇಶನಕ್ಕೂ ಮುನ್ನ ಸಂಸದರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಬಿಜೆಪಿ ಸಂಸದರಾದ ಮೀನಾಕ್ಷಿ ಲೇಖಿ, ಪರ್ವೇಶ್ ಸಾಹಿಬ್ ಸಿಂಗ್, ಅನಂತ್ ಕುಮಾರ್ ಹೆಗಡೆ ಹಾಗೂ ವೈಎಸ್ಆರ್ ಕಾಂಗ್ರೆಸ್ ಸಂಸದರಾದ ರೆಡ್ಡಪ್ಪ, ಗೊಡ್ಡೇಟಿ ಮಾಧವಿ ಸೇರಿ ಒಟ್ಟು 17 ಸಂಸದರ ವರದಿ ಪಾಸಿಟಿವ್ ಬಂದಿದೆ.
ಇನ್ನು ಸೋಂಕು ಭೀತಿ ಹಿನ್ನೆಲೆ ಮುಂಜಾಗ್ರತಾ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಇದೇ ಮೊದಲ ಬಾರಿಗೆ 'ಹಾಜರಾತಿ ನೋಂದಣಿ' ಆ್ಯಪ್ ಮೂಲಕ ಸಂಸದರ ಹಾಜರಾತಿಯನ್ನು ದಾಖಲಿಸಿಕೊಳ್ಳಲಾಗಿದೆ. ಲೋಕಸಭಾ ಕಲಾಪವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.