ನವದೆಹಲಿ/ಕೋಯಿಕ್ಕೋಡ್:ಕೇರಳದ ಕೋಯಿಕ್ಕೋಡ್ ಏರ್ಪೋರ್ಟ್ನಲ್ಲಿ ಇಳಿಯಲು ಯತ್ನಿಸುವಾಗ ಅಪಘಾತಕ್ಕೀಡಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸಾವಿಗೀಡಾದ ಸಹ ಪೈಲಟ್ ಅಖಿಲೇಶ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ.
ಇದೇ ವೇಳೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರು ಅಖಿಲೇಶ್ ಕುಮಾರ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ. ಪಾರ್ಥಿವ ಶರೀರವನ್ನು ಉತ್ತರ ಪ್ರದೇಶದ ಮಥುರಾದಲ್ಲಿರುವ ಅವರ ಸ್ವಗೃಹಕ್ಕೆ ಕೊಂಡೊಯ್ಯಲಾಗುತ್ತಿದೆ. ಇದಕ್ಕೂ ಮುನ್ನ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪೈಲಟ್ ಮತ್ತು ಸಹ ಪೈಲಟ್‌ನ ಪಾರ್ಥಿವ ಶರೀರವನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು.