ನವದೆಹಲಿ: ರಾಷ್ಟ್ರರಾಜಧಾನಿ ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಟ್ರ್ಯಾಕ್ಟರ್ ಪರೇಡ್ ಆಯೋಜಿಸಲಾಗಿತ್ತು. ಈ ವೇಳೆ, ಹಿಂಸಾತ್ಮಕ ಘರ್ಷಣೆಗಳು ನಡೆದ ಪರಿಣಾಮ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಎಲ್ಲ ರೈತರು ತಮ್ಮ ಮನೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.
ಈ ಹಿನ್ನೆಲೆ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿ,10 ಸಿಆರ್ಪಿಎಫ್ ತುಕಡಿ ನಿಯೋಜಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸೂಚಿಸಿದ್ದರು.
ನಿನ್ನೆ ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ರೈತ ಮುಖಂಡರು ಈ ಹಿಂಸಾತ್ಮಾಕ ಕೃತ್ಯದಲ್ಲಿ ರೈತರು ಭಾಗಿಯಾಗಿಲ್ಲ ಎಂದಿದ್ದಾರೆ. ಅಲ್ಲದೇ ದೆಹಲಿ, ಹರಿಯಾಣ, ಪಂಜಾಬ್ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.