ಪಲಾಮೂ:ವಿವಾಹಿತ ಮಹಿಳೆಯೊಬ್ಬಳು ತನ್ನ ಮುದ್ದಾದ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತರಪುರದಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನ 2 ಗಂಟೆಗೆ ಸುಮಾರಿಗೆ ತಾಯಿ ಅನೀತಾ ದೇವಿ ತನ್ನ 5 ವರ್ಷದ ಮಗಳು ಮತ್ತು 3 ವರ್ಷದ ಮಗನ ಜೊತೆ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಹೊರವಲಯದಲ್ಲಿ ಇವರು ವಾಸಿಸುತ್ತಿರುವುದರಿಂದ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.