ಮಧ್ಯಪ್ರದೇಶ:ಅಜ್ನರ್ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ ಪ್ರವಾಸಿಗರ ಮೂರು ಕಾರುಗಳು ಕೊಚ್ಚಿ ಹೋಗಿರುವ ಘಟನೆ ಧಾರ್ ಜಿಲ್ಲೆಯ ಧಮ್ನೋಡ್ ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿ ಜ್ವಾಲೆಯಲ್ಲಿ ನಡೆದಿದೆ.
ಅಜ್ನರ್ ನದಿ ಅಬ್ಬರಕ್ಕೆ ಕೊಚ್ಚಿ ಹೋದ 3 ಕಾರುಗಳು... ವಿಡಿಯೋ - three Cars washed away in ajnar River
ಮಧ್ಯಪ್ರದೇಶದ ಅಜ್ನರ್ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ ಪ್ರವಾಸಿಗರ ಮೂರು ಕಾರುಗಳು ಕೊಚ್ಚಿ ಹೋಗಿವೆ. ಕಾರು ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
ಪ್ರವಾಹದಲ್ಲಿ ಕೊಚ್ಚಿ ಹೋದ ಕಾರುಗಳು
ಕಾರುಗಳು ಕೊಚ್ಚಿ ಹೋಗುವುದನ್ನು ತಡೆಯಲು ಸ್ಥಳೀಯರು ಪ್ರಯತ್ನಿಸಿದರೂ ಸಹ ನೀರಿನ ರಭಸಕ್ಕೆ ತೇಲಿ ಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಪ್ರದೇಶದಲ್ಲಿ ಬೆಟ್ಟದ ಮೇಲಿಂದ ನೀರು ಹರಿಯುತ್ತಿದ್ದು, ಸುಂದರ ದೃಶ್ಯ ನೋಡಲು ಅನೇಕ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.