ಭೋಪಾಲ್(ಮಧ್ಯಪ್ರದೇಶ): ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳ ನಂತರ ಐವರು ನಾಯಕರು ಸಚಿವರಾಗಿ ಇಂದು ಸಂಪುಟ ಸೇರಿಕೊಂಡಿದ್ದಾರೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆ ಮಾಡಿರುವ ಕಾರಣ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಒಬ್ಬರು ಮಹಿಳೆ ಮತ್ತು ಇಬ್ಬರು ಮಾಜಿ ಶಾಸಕರು ಸೇರಿದಂತೆ ಐವರಿಗೆ ರಾಜ್ಯಪಾಲ ಲಾಲ್ಜಿ ಟಂಡನ್ ಪ್ರಮಾಣವಚನ ಬೋಧಿಸಿದರು.
ನರೋತ್ತಮ್ ಮಿಶ್ರಾ, ಕಮಲ್ ಪಟೇಲ್, ಮೀನಾ ಸಿಂಗ್, ತುಳಸಿ ಸಿಲಾವತ್ ಮತ್ತು ಗೋವಿಂದ್ ಸಿಂಗ್ ರಜಪೂತ್ ಪ್ರಮಾಣವಚನ ಸ್ವೀಕರಿಸಿದ ಸಚಿವಾಗಿದ್ದಾರೆ. ಸಿಲಾವತ್ ಮತ್ತು ರಜಪೂತ ಜ್ಯೋತಿರಾದಿತ್ಯ ಸಿಂಧಿಯಾ ಅವರ ಗುಂಪಿನಿಂದ ಬಂದ ನಾಯಕರು. ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಉಪಸ್ಥಿತರಿದ್ದರು.
22 ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಕಾಂಗ್ರೆಸ್ ಸರ್ಕಾರ ಪಥನವಾಗಿತ್ತು. ಹೀಗಾಗಿ ಕಳೆದ ಮಾರ್ಚ್ 23 ರಂದು ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.