ಭೋಪಾಲ್ (ಮಧ್ಯಪ್ರದೇಶ): ನಿವಾರಿ ಜಿಲ್ಲೆಯಲ್ಲಿ ಕೊಳವೆಬಾವಿಯೊಳಗೆ ಬಿದ್ದು ಮೃತಪಟ್ಟ ಮೂರು ವರ್ಷದ ಬಾಲಕನ ಕುಟುಂಬಕ್ಕೆ ಮಧ್ಯಪ್ರದೇಶ ಸರ್ಕಾರ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿದೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪರಿಹಾರ ಘೋಷಣೆ ಮಾಡಿದ್ದು, ಜನರಿಗೆ ಪಾಳು ಬಿದ್ದ ಕೊಳವೆ ಬಾವಿಗಳನ್ನು ಮುಚ್ಚುವಂತೆ ಮನವಿ ಮಾಡಿದ್ದಾರೆ.
ಇದರ ಜೊತೆಗೆ ಮಧ್ಯಪ್ರದೇಶ ಸಿಎಂ ಕಚೇರಿ ಟ್ವೀಟ್ ಮಾಡಿದ್ದು, ಇಡೀ ರಾಜ್ಯ ಮೃತ ಬಾಲಕನ ಕುಟುಂಬದೊಂದಿಗೆ ನಿಲ್ಲುತ್ತದೆ. ಸಿಎಂ ಶಿವರಾಜ್ಸಿಂಗ್ ಚೌಹಾಣ್ 5 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. ಯಾವುದೇ ಕೊಳವೆ ಬಾವಿಯನ್ನು ಹಾಗೆಯೇ ಬಿಡದಿರುವಂತೆ ಸಿಎಂ ಮನವಿ ಮಾಡಿದ್ದಾರೆ ಎಂದು ಉಲ್ಲೇಖಿಸಿದೆ.
ಕೆಲವು ದಿನಗಳ ಹಿಂದೆಮಧ್ಯಪ್ರದೇಶದ ಪೃಥ್ವಿಪುರ ಪ್ರದೇಶದ ಸೇತುಪುರ ಗ್ರಾಮದಲ್ಲಿ ಮೂರು ವರ್ಷದ ಬಾಲಕ ಪ್ರಹ್ಲಾದ್ ಎಂಬಾತ ಕೊಳವೆ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ್ದು, ದೇಶಾದ್ಯಂತ ಸಾಕಷ್ಟು ಸಂತಾಪ ವ್ಯಕ್ತವಾಗಿತ್ತು.