ಉಜ್ಜಯಿನಿ (ಮಧ್ಯಪ್ರದೇಶ): ಮದ್ಯಪಾನ ಮಾಡಿದ ಪೊಲೀಸ್ ಕಾನ್‌ಸ್ಟೇಬಲ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ಮದ್ಯಪಾನ ಮಾಡಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್‌ಸ್ಟೇಬಲ್ - ಉಜ್ಜಯಿನಿ
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಮದ್ಯಪಾನ ಮಾಡಿದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ವೈದ್ಯ ಹಾಗೂ ಅಟೆಂಡರ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಆರೋಗ್ಯ ತಪಾಸಣೆಗೆ ಎಂದು ಕಾನ್‌ಸ್ಟೇಬಲ್ ರಾಜು ನಿಕೋಡ್ ಆಸ್ಪತ್ರೆಗೆ ಭೇಟಿ ನೀಡಿದ್ದಾನೆ. ಈ ಸಂದರ್ಭದಲ್ಲಿ ಆತ ಮದ್ಯಪಾನ ಮಾಡಿದ್ದನು. ಈ ವೇಳೆ ವೈದ್ಯರಾದ ಡಾ. ಅಮಿತ್ ಪಾಟಿದಾರ್ ಬೇರೆ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ. ಇದರಿಂದ ಕೋಪಗೊಂಡ ಆತ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ವೈದ್ಯರನ್ನು ರಕ್ಷಿಸಲು ಬಂದ ಅಟೆಂಡರ್ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಕೊಟ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಮನೀಶ್ ಲೋಧಾ ತಿಳಿಸಿದ್ದಾರೆ.
ಸದ್ಯ ವೈದ್ಯ ನೀಡಿದ ದೂರಿನ ಪ್ರಕಾರ ಮಾಧವ್ನಗರ ಪ್ರದೇಶದ ನಗರ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತನಿಖೆ ಕೈಗೆತ್ತಿಕೊಂಡಿದ್ದಾರೆ.