ನವದೆಹಲಿ:ದೂರದರ್ಶನದಲ್ಲಿ ಪ್ರಸಾರವಾಗಿ ಕೋಟ್ಯಂತರ ಜನ ಮೆಚ್ಚುಗೆಗೆ ಪಾತ್ರವಾಗಿದ್ದ ರಮಾನಂದ ಸಾಗರ ನಿರ್ದೇಶನದ 'ರಾಮಾಯಣ' ಧಾರಾವಾಹಿಯಲ್ಲಿ ಸುಗ್ರೀವನ ಪಾತ್ರ ನಿರ್ವಹಿಸಿದ್ದ ಶ್ಯಾಮ್ ಸುಂದರ್ ನಿಧನರಾಗಿದ್ದಾರೆ.
ಇದೇ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ನಿರ್ವಹಿಸಿದ್ದ ಅರುಣ್ ಗೋವಿಲ್ ಟ್ವೀಟ್ ಮಾಡಿ ಶ್ಯಾಮ್ ಸುಂದರ್ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ.
ರಮಾನಂದ ಸಾಗರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ಅವರೊಬ್ಬ ಅದ್ಭುತ ವ್ಯಕ್ತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸಂತಾಪ ಸೂಚಿಸಿದ್ದಾರೆ.
ಕಾನ್ಸರ್ನಿಂದ ಬಳಲುತ್ತಿದ್ದ ಶ್ಯಾಮ್ ಏಪ್ರಿಲ್ 8ರಂದು ಹರಿಯಾಣದ ಕಲ್ಕಾ ಎಂಬಲ್ಲಿ ಸಾವನ್ನಪ್ಪಿದ್ದಾರೆ. ಜನವರಿ 25,1987ರಿಂದ ದೂರದರ್ಶನದಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿ ತದನಂತರ ಇದೇ ಮೊದಲ ಬಾರಿಗೆ ಲಾಕ್ಡೌನ್ ವೇಳೆ ಮರು ಪ್ರಸಾರವಾಗುತ್ತಿದೆ.